ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಭಾಗದಲ್ಲಿ ಹಗುರದಿಂದ ಮಳೆಯಾಗಲಿದ್ದು, ದಕ್ಷಿಣ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ, ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.