ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಇದೀಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ.
ದಾಖಲೆ ಮೊತ್ತದ ಹಣವನ್ನು’ಕಬ್ಜ’ ಚಿತ್ರದ ಸಲುವಾಗಿ ಆರ್. ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ.
ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ. ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ ‘ಕಬ್ಜ’ ಚಿತ್ರ ಸೇರಿದೆ.