ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಚಳಿಯ ಅನುಭವ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಲ್ಲದೇ ಕರಾವಳಿ ಮಲೆನಾಡು ಭಾಗಕ್ಕೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಗುಡುಗು, ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.