ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮತ್ತೆ ಹೇಮಂತ್ ಸೊರೇನ್ ಅಧಿಕಾರ ಸ್ವೀಕರಿಸಲಿದ್ದಾರೆ.
ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರಿಗೆ ಚಂಪೈ ಸೊರೇನ್ ರಾಜೀನಾಮೆ ಪತ್ರ ನೀಡಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ (Hemant Soren) ಇಲ್ಲಿ ಸರ್ಕಾರ ರಚಿಸಲಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸುವ ಮೊದಲು ಜನವರಿಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಕಳೆದ ವಾರ ಅವರಿಗೆ ಜಾಮೀನು ನೀಡಲಾಗಿತ್ತು. ಹೀಗಾಗಿ ಹೇಮಂತ್ ಸೊರೆನ್ ಅವರು ಮೂರನೇ ಬಾರಿಗೆ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.