ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿದ್ವಾರದ ಸೇಲಂಪುರದಲ್ಲಿರುವ ಗೋದಾಮಿನಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.
“ಸೇಲಂಪುರದ ಗೋಡೌನ್‌ನಲ್ಲಿ ಬೆಂಕಿ ಅವಘಡದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹಲವಾರು ಅಗ್ನಿಶಾಮಕ ಟೆಂಡರ್‌ಗಳು ಇಲ್ಲಿವೆ. ನಾವು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದೇವೆ. 2 ಗಂಟೆಗಳಿಗೂ ಹೆಚ್ಚು ಕಾಲ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಹರಿದ್ವಾರದ ಎಫ್‌ಎಸ್‌ಒ, ಶಿಶುಪಾಲ್ ಸಿಂಗ್ ನೇಗಿ ತಿಳಿಸಿದ್ದಾರೆ.