ಶ್ರೀದೇವಿ-ಯುವರಾಜ್ ಡಿವೋರ್ಸ್‌ ಕೇಸ್‌, ವಿಚಾರಣೆ ಮುಂದೂಡಿದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ‌ ವಿಚ್ಛೇದನ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.

ಕೌಟುಂಬಿಕ ನ್ಯಾಯಾಲಯದಲ್ಲಿ ನಟ ಯುವ ರಾಜ್ ಕುಮಾರ್ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ಶ್ರೀದೇವಿಗೆ ಅಕ್ರಮ ಸಂಬಂಧ ಇದೆಯೆಂಬ ಆರೋಪವನ್ನು ಸಹ ಹೊರಿಸಿದ್ದಾರೆ. ಇಂದು ವಿಚ್ಛೇದನ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದ್ದು, ಆರಂಭಿಕ ವಿಚಾರಣೆ ಬಳಿಕ, ಮುಂದಿನ ವಿಚಾರಣೆಯನ್ನು‌ ಆಗಸ್ಟ್ 23 ಕ್ಕೆ ಮುಂದೂಡಲಾಗಿದೆ.

ಯುವ ರಾಜ್ ಕುಮಾರ್ ಸಲ್ಲಿಸಿರುವ ವಿಚ್ಛೇದನಕ್ಕೆ ಶ್ರೀದೇವಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಆಕ್ಷೇಪಣೆ ಬಗ್ಗೆ ವಾದ ಮಂಡಿಸಲು ಶ್ರೀದೇವಿ ಪರ ವಕೀಲರು ಅವಕಾಶ ಕೇಳಿದರು. ಆದರೆ ಇದಕ್ಕೆ ಅವಕಾಶ ನೀಡದ ನ್ಯಾಯಾಧೀಶರು. ಇದು ಕೌಟುಂಬಿಕ ಕಲಹವಾದ್ದರಿಂದ ಮೊದಲು ಕೌನ್ಸಲಿಂಗ್ ಆಗಬೇಕು. ಅದು ಮುಕ್ತಾಯ ಆದ ಬಳಿಕವಷ್ಟೆ ಆಕ್ಷೇಪಣೆ ಕೇಳಲಾಗುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here