ಹೊಸದಿಗಂತ ವರದಿ, ಮಂಗಳೂರು :
ಉಡುಪಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸುರುಗಟ್ಟಿ ಸಾವನ್ನಪ್ಪಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇನ್ನು ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಮಳೆಯ ಆರ್ಭಟ ಹೆಚ್ಚಿದ್ದು, ಬೈಂದೂರು ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ಪ್ರವಾಹ ಉಂಟಾಗಿದೆ.