ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಷ್ಟು ದಿನ ಹೊರಗೆ ಬಾರದ ಹಗರಣ ಹೀಗ ಬಂದಿದ್ದು ಯಾಕೆ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯ್ತು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಪರೋಕ್ಷ ಆರೋಪ ಮಾಡಿದ್ದಾರೆ.
ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.