ಹೊಸದಿಗಂತ ವರದಿ, ಅಂಕೋಲಾ :
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ನೆರೆ ಪ್ರಮಾಣ ತುಸು ತಗ್ಗಿದೆ. ಶಿರಸಿ ಕುಮಟಾ ರಸ್ತೆಯಲ್ಲಿ ಮರ ಮತ್ತು ಮಣ್ಣು ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು ಸಂಜೆ ವೇಳೆ ಮರ ಮತ್ತು ಮಣ್ಣನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.ಜಿಲ್ಲೆಗೆ ಎನ್.ಡಿ. ಆರ್. ಎಫ್ ತಂಡ ಬಂದಿದ್ದು, ವಿವಿದೆಡೆ ನಿಯೋಜನೆ ಮಾಡಲಾಗಿದೆ.
ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ರವರು ಹೊನ್ನಾವರ ತಾಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆರೆ ಪ್ರದೇಶಗಳಿಗೆ ಸಂಬಂಧಿಸಿದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವವವರಿಗೆ ಯಾವುದೇ ಕೊರತೆಯಾಗದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.