ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ತಗ್ಗು ಪ್ರದೇಶದ ಜನತೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ರಾತ್ರಿಯಿಡೀ ಗುಡುಗು ಸಹಿತ ಮಳೆ ಸುರಿದಿದ್ದು, ಜನರ ಹೊರಬರಲಾರದ ಪರಿಸ್ಥಿತಿ ನಿರ್ಮಾಣವಾಗಿದೆ.
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗ್ತಿರೋ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ 2 ದಿನಗಳ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಉಡುಪಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡದಲ್ಲೂ ವರುಣಾರ್ಭಟ ಜೋರಾಗಿದ್ದು 4 ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. 2 ದಿನ ಜಿಲ್ಲೆಯಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತ ಕ್ರಮವಾಗಿ ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.