ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಝಿಕಾ ವೈಸರ್‌ಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಶಿವಮೊಗ್ಗದ ಗಾಂಧಿ ನಗರ ನಿವಾಸಿಯಾದ 74 ವರ್ಷದ ವೃದ್ಧರೊಬ್ಬರು ಝಿಕಾ ವೈರಸ್‌ಗೆ ಬಲಿಯಾಗಿದ್ದಾರೆ ಎನ್ನಲಾಗಿದೆ, ಜ್ವರದ ಜೊತೆ ಬೇರೆ ಸಮಸ್ಯೆಗಳೂ ಇದ್ದವು ಎನ್ನಲಾಗಿದೆ.
ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.21 ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆ ಆಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಗುರುವಾರ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದರು. ತೀವ್ರ ಆರೋಗ್ಯ ಸಮಸ್ಯೆಯಿಂದ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.