ಮುಂದಿನ ಸೂಚನೆಯವರೆಗೆ ನೀಟ್ ಯುಜಿ ಕೌನ್ಸೆಲಿಂಗ್ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನೀಟ್‌ ಯುಜಿ ಕೌನ್ಸೆಲಿಂಗ್ ಆರಂಭಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಒಂದು ಹೊರಬಿದ್ದಿದ್ದು, ಇಂದಿನಿಂದ ಪ್ರಾರಂಭವಾಗಬೇಕಿದ್ದ ನೀಟ್-ಯುಜಿ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ.

ತೀವ್ರ ಒತ್ತಡ ವ್ಯಕ್ತವಾದ ಬೆನ್ನಲ್ಲೇ ಕೌನ್ಸಿಲಿಂಗ್ ಮುಂದೂಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಆದರೆ ಕೌನ್ಸೆಲಿಂಗ್‌ನ ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ವೇಳೆ ನೀಟ್ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಉಲ್ಲೇಖಿಸಿತ್ತು. ಸದ್ಯ ಜುಲೈ 8ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಯ ಮೇಲೂ ಸಂಬಂಧಪಟ್ಟ ಇಲಾಖೆಗಳು ಮತ್ತು ಸಚಿವಾಲಯಗಳು ಕಣ್ಣಿಟ್ಟಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!