ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಉಪಚುನಾವಣೆಗೆ ಬಿಜೆಪಿ ಪಕ್ಷವು ಉಸ್ತುವಾರಿಗಳನ್ನು ನೇಮಿಸಿದೆ. ನಿನ್ನೆಯಷ್ಟೇ, ಲೋಕಸಭೆ ಚುನಾವಣೆಯ ನಂತರ, ಕರ್ನಾಟಕದಲ್ಲಿ ಬಿಜೆಪಿ ಮುಖ್ಯಸ್ಥರು ಮತ್ತು ಉಪಾಧ್ಯಕ್ಷರು ಬದಲಾಗಿದ್ದಾರೆ ಮತ್ತು ಶ್ರೀ ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯದ ಹೊಸ ಬಿಜೆಪಿ ಮುಖ್ಯಸ್ಥರಾದರು ಮತ್ತು ಶ್ರೀ ಸುಧಾಕರ್ ರೆಡ್ಡಿ ಅವರನ್ನು ಜಂಟಿ ಅಧಿಕಾರಿಯಾಗಿ ನೇಮಿಸಲಾಯಿತು. ಇದರ ಬೆನ್ನಲ್ಲೇ ಇಂದು ಉಪಚುನಾವಣೆಯ ಉಸ್ತುವಾರಿಯನ್ನು ಭಾರತೀಯ ಜನತಾ ಪಕ್ಷ ನೇಮಿಸಿದೆ.

ವಿಧಾನಪರಿಷತ್ ದ.ಕ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಸಂಸದರಾದ ಬಸವರಾಜ ಬೊಮ್ಮಾಯಿ‌, ಕೋಟ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರನ್ನು ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ.

ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಉಪನಾಯಕ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಸಂಡೂರು ವಿಧಾನಸಭಾ ಕ್ಷೇತ್ರ-ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಎಂಎಲ್​ಸಿಗಳಾದ ಎನ್.ರವಿಕುಮಾರ್, ಕೆ.ಎಸ್.ನವೀನ್ ನೇಮಿಸಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾದ ಡಾ.ಅಶ್ವತ್ಥ್​​ನಾರಾಯಣ, ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಹೆಚ್.ಎಸ್. ಗೋಪಿನಾಥ ರೆಡ್ಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ನೇಮಕ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!