ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತಿನ ಸೂರತ್ನ ಸಚಿನ್ ಪಾಲಿ ಗ್ರಾಮದಲ್ಲಿ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಆರು ಅಂತಸ್ತಿನ ಕಟ್ಟಡ ಕುಸಿದು 15 ಮಂದಿ ಗಾಯಗೊಂಡಿದ್ದು, ಕನಿಷ್ಠ ನಾಲ್ವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಟ್ಟಡದಲ್ಲಿ ಹಲವಾರು ಜವಳಿ ಕೆಲಸಗಾರರು ಮತ್ತು ಅವರ ಕುಟುಂಬಗಳು ಅಲ್ಲಿ ಅಪಾರ್ಟ್ಮೆಂಟ್ಗಳನ್ನು ಬಾಡಿಗೆಗೆ ಪಡೆದಿದ್ದವು ಎನ್ನಲಾಗಿದೆ. ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.