ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ, ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜು.08 ರಂದೂ ಈ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ.
ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.