ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಸ್ವಾಮೀಜಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.

ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!