ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರ್ಯಾಣದ ಪಂಚಕುಲದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪಿಂಜೋರ್ ಬಳಿ ಅಪಘಾತ ಸಂಭವಿಸಿದೆ, ಬಸ್‌ನಲ್ಲಿ 40 ಶಾಲಾ ಮಕ್ಕಳು ಸೇರಿದಂತೆ 70 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಂಡೀಗಢ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈವರೆಗಿನ ತನಿಖೆಯಿಂದ ಬಸ್‌ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದದ್ದು ಬೆಳಕಿಗೆ ಬಂದಿದೆ. ವಾಸ್ತವವಾಗಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಮಕ್ಕಳು ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ದೇ ಕಾರಣಕ್ಕೆ ಬಸ್‌ನಲ್ಲಿ ಹೆಚ್ಚು ಪ್ರಯಾಣಿಕರಿದ್ದರು. ಚಾಲಕನಿಗೆ ಬಸ್ ನಿಯಂತ್ರಿಸಲು ಸಾಧ್ಯವಾಗದೆ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.
ಪಿಂಜೋರ್ ಪಂಚಕುಲದ ಗುಡ್ಡಗಾಡು ಪ್ರದೇಶವಾಗಿದೆ. ಇಲ್ಲಿನ ರಸ್ತೆಗಳು ಅಂಕುಡೊಂಕಾಗಿವೆ. ರಸ್ತೆಯ ದುಸ್ಥಿತಿಯೂ ಅಪಘಾತಕ್ಕೆ ಕಾರಣವಾಗಿರಬಹುದು.