ಡೆಂಗ್ಯೂ ಸೀರಿಯಸ್‌ ವಿಷ್ಯ, ಮನೆ ಸುತ್ತಮುತ್ತ ಗಲೀಜಿರದಂತೆ ನೋಡಿಕೊಳ್ಳಿ: ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡೆಂಗ್ಯೂ ತಡೆಗಟ್ಟಲು ನೈರ್ಮಲ್ಯ ಅಗತ್ಯವಾಗಿದ್ದು, ನಿವೇಶನಗಳಲ್ಲಿ ಕಸದ ರಾಶಿ ಅಥವಾ ನೀರು ನಿಂತರೆ ನಿವೇಶನದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಡೆಂಗ್ಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತ ಸೂಚನೆಗಳನ್ನು ಹೊರಡಿಸಿರುವ ಸಚಿವರು, ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿಯನ್ನು ಡೆಂಗ್ಯೂ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾ.ಪಂ.ಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಕುಡಿಯುವ ನೀರಿನ ಸರಬರಾಜು ಟ್ಯಾಂಕ್‍ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!