ಆಷಾಢ ಶುಕ್ರವಾರದಂದು ಚಾಮುಂಡಿ ತಾಯಿ ದರುಶನಕ್ಕೆ ತೆರಳುವವರಿಗೆ ಬಸ್‌ ಸೇವೆ ಫ್ರೀ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್‌ ಟಿಕೆಟ್‌ ಉಚಿತವಾಗಿರಲಿದೆ.

ಆಷಾಢ ಶುಕ್ರವಾರಕ್ಕಾಗಿ ಮೈಸೂರು ಜಿಲ್ಲಾಡಳಿತ ಮಂಡಳಿ ಭರದ ಸಿದ್ಧತೆ ನಡೆಸಿದ್ದು, ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಉಚಿತ ಬಸ್ ಸೇವೆ ಒದಗಿಸಲಿದೆ. ಲಲಿತ ಮಹಲ್ ಅರಮನೆ ಮೈದಾನದಿಂದ ನಲವತ್ತು ಬಸ್‌ಗಳು ಸಂಚರಿಸಲಿದ್ದು, ಚಾಮುಂಡಿ ಬೆಟ್ಟದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೆಶ್ವರಿಗೆ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತದೆ. ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್‌ ಇರುವುದಿಲ್ಲ. ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸಾಮಾನ್ಯ ಸರತಿ ಸಾಲಿನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ವಿಶೇಷ ದರ್ಶನಕ್ಕಾಗಿ 50 ಮತ್ತು 300 ರೂ ಟಿಕೆಟ್‌ಗಳನ್ನು ಸಹ ಖರೀದಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!