ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ಮಧ್ಯಮ ಒಳನಾಡಿನಲ್ಲಿ ಸಕ್ರಿಯವಾಗಿದೆ. ಕರಾವಳಿ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ, ಗಾಳಿಯ ವೇಗ ಗಂಟೆಗೆ 30-40 ಕಿಮೀ ಒಳಗೆ ಇರುತ್ತದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.