ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯನ ಮೃತದೇಹ ಕಾರಿನಲ್ಲಿ ಪತ್ತೆಯಾಗಿದ್ದು, ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವಂತೆ ಮೇಲುನೋಟಕ್ಕೆ ಕಂಡುಬಂದಿದೆ.
ಆದರೆ ಇದರ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ಇದು ಅಸಹಜ ಸಾವು ಎಂದು ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಸಹೋದರ ಪ್ರಭುದೇವ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮದುವೆ ಆಗಿ 16 ವರ್ಷವಾಗಿತ್ತು, ಮಕ್ಕಳಾಗಿರಲಿಲ್ಲ ಎಂದು ಪ್ರತಾಪ್ ತೀವ್ರ ಬೇಸರದಲ್ಲಿದ್ದ. ಮಂಕಾಗಿ ತೀವ್ರ ಖಿನ್ನತೆಗೆ ಒಳಗಾಗಿದ್ದ. ಆದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುವ ರೀತಿ ಮನಸ್ಥಿತಿ ಹೊಂದಿರಲಿಲ್ಲ. ಇದು ಅಸಹಜ ಸಾವು ಎಂದು ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು ದೂರು ದಾಖಲಿಸಿದ್ದಾರೆ.
ಬಿಸಿ.ಪಾಟೀಲ್ ಮೊದಲ ಪುತ್ರಿ ಸೌಮ್ಯ ಪತಿ ಪ್ರತಾಪ್ ಕುಮಾರ್ ಕಾರಿನಲ್ಲೇ ಸೂಸೈಡ್ ಮಾಡ್ಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಅರಣ್ಯದ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಒಳಗೆ ವಿಷದ ಬಾಟಲ್ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ರು ಮೆಗ್ಗಾನ್ ಆಸ್ಪತ್ರೆಗೆ ಮೃತದೇಹ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸ್ವಗ್ರಾಮ ಕತ್ತಲಗೆರೆ ಗ್ರಾಮದಲ್ಲಿ ಇಂದು ಪ್ರತಾಪ್ ಅಂತ್ಯಸಂಸ್ಕಾರ ನಡೆಯಲಿದೆ.