ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ದಿನದಿಂದ ದಿನಕ್ಕೆ ಸಮಸ್ಯೆಯಾಗುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಭೂಮಿ ದೋಚಲು ಪ್ರಯತ್ನಿಸಿದ ಆರೋಪದಲ್ಲಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ.
ಇದೇ ಘಟನೆಯಲ್ಲಿ ತಹಶೀಲ್ದಾರ್, ಉಪ ನೋಂದಣಾಧಿಕಾರಿ, ಮುಡಾ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.