ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ ತಿಂಗಳ ಗೃಹಲಕ್ಷ್ಮೀ ಹಣ ಪಾವತಿಯಾಗದೇ ಇದ್ದು, ಮಹಿಳಾಮಣಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದರು. ಆದರೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಣ ನೀಡುವ ಭರವಸೆ ನೀಡಿದ್ದಾರೆ.
ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.