ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಶೇ.80ರಷ್ಟು ಜನರು ಬಿಪಿಎಲ್ ಕಾರ್ಡ್ ಹೊಂದಿರುವುದರಿಂದ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲದವರನ್ನು ಪರಿಶೀಲಿಸಿ ರದ್ದುಪಡಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.
ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಪಡಿಸಿ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ನೀಡಲು ಕೂಡಲೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೂಡಲೇ ಸಮಗ್ರ ತನಿಖೆ ನಡೆಸಿ ಉಪಯೋಗಕ್ಕೆ ಬಾರದ ಬಿಪಿಎಲ್ ಕಾರ್ಡ್ ಗಳನ್ನು ನಾಶಪಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.