ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಚೆನ್ನೈನಲ್ಲಿ ಹತ್ಯೆಗೀಡಾದ ಬಿಎಸ್ಪಿ ರಾಜ್ಯಾಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಅವರ ಮನೆಗೆ ಭೇಟಿ ನೀಡಿದರು.
ಆರ್ಮ್ಸ್ಟ್ರಾಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮುಖ್ಯಮಂತ್ರಿಗಳು ಮೃತರ ಪತ್ನಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕಳೆದ ಶುಕ್ರವಾರ ಚೆನ್ನೈನ ಪೆರಂಬೂರ್ನಲ್ಲಿರುವ ಅವರ ನಿವಾಸದ ಬಳಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಆರ್ಮ್ಸ್ಟ್ರಾಂಗ್ ಅವರನ್ನು ಹತ್ಯೆ ಮಾಡಿತ್ತು. ಕಳೆದ ವರ್ಷ ಆಗಸ್ಟ್ನಲ್ಲಿ ಹತ್ಯೆಗೀಡಾದ ದರೋಡೆಕೋರ ಆರ್ಕಾಟ್ ಸುರೇಶ್ನ ಸಹಚರರು ಕೊಲೆಯಲ್ಲಿ ಭಾಗಿಯಾಗಿರುವ ಶಂಕೆಯನ್ನು ಚೆನ್ನೈ ಪೊಲೀಸರು ಶಂಕಿಸಿದ್ದಾರೆ.