ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಸೂರಜ್ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದು, ಹೀಗಾಗಿ ಸಿಆರ್‌ಪಿಸಿ 437 ಅಡಿ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ.
ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜುಲೈ 3ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ನ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದರು. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.