ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜುಲೈ 10ರಂದು ಬೆಳಗ್ಗೆ 11.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ವಿದ್ಯಾರ್ಥಿಗಳು ಎನ್‌ಐಸಿಯ ಜಾಲತಾಣ httsps://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 ಜೂನ್ 14 ರಿಂದ 22ರವರೆಗೆ ನಡೆದಿತ್ತು. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 724 ಪರೀಕ್ಷಾ ಕೇಂದ್ರಗಳಲ್ಲಿ 2,23,308 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 1,44,160 ಬಾಲಕರು ಹಾಗೂ 7,9,148 ಬಾಲಕಿಯರು ಇದ್ದಾರೆ. ಫಲಿತಾಂಶ ಹೆಚ್ಚಳಕ್ಕಾಗಿ 13085 ವಿದ್ಯಾರ್ಥಿಗಳಿಂದ SSLC-2 ಪರೀಕ್ಷೆ ಬರೆದಿದ್ದರು.