ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಸರ್ಕಾರದ ಪ್ರಸ್ತಾವನೆಯನ್ನು ಬಿಜೆಪಿ ಮತ್ತು ಜೆಡಿಎಸ್ ಸಂಪೂರ್ಣ ವಿರೋಧಿಸಿದೆ.
ಸರ್ಕಾರಗ ಪ್ರಸ್ತಾವನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಆರ್. ಅಶೋಕ್ ಅವರು ವಿರೋಧ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಮನಗರದಲ್ಲಿ ‘ರಾಮ’ನಿದ್ದಾನೆ ಎಂಬ ದ್ವೇಷವೂ ಅಥವಾ ರಿಯಲ್ ಎಸ್ಟೇಟ್ ಕುಬೇರರಾಗುವ ದುರಾಸೆಯೋ?ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಕಾಂಗ್ರೆಸ್ ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.
ಡಿಸಿಎಂ ಡಿಕೆ.ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಬೆಂಗಳೂರಿನ ಜನತೆಗೆ ಮೋಸ ಮಾಡಿದ್ದಾಯ್ತು. ಈಗ ಹೆಸರು ಬದಲಾವಣೆ ಮಾಡುವ ಮೂಲಕ ರಾಮನಗರದ ಜನತೆಯ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತೀದ್ದೀರಲ್ಲ ಇನ್ನೆಷ್ಟು ದಿನ ಹೀಗೆ ಜನರ ದಿಕ್ಕು ತಪ್ಪಿಸಿ ಕಾಲಹರಣ ಮಾಡುತ್ತೀರಿ? ಹೆಸರು ಬದಲಾವಣೆ ಮಾಡಿದ ಮಾತ್ರಕ್ಕೆ ಅಭಿವೃದ್ಧಿ ಆಗಿಬಿಡುತ್ತಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮ ನಗರ ಎಂದು ಪುನರ್ ನಾಮಕರಣ ಮಾಡಲಿ. ಏಕೆಂದರೆ ಈವರೆಗಿನ ಮುಖ್ಯಮಂತ್ರಿಳಲ್ಲೇ ಅತ್ಯಂತ ಕೆಟ್ಟ ಮುಖ್ಯಮಂತ್ರಿಯನ್ನು ಜ ನ ನೆನಪಿಸಿಕೊಳ್ಳಲು ಸಾಧ್ಯ !