SSLC-2 | ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ರಿಸಲ್ಟ್‌ ಇಲ್ಲಿ ವೀಕ್ಷಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕ ಎಸ್​ಎಸ್​ಎಲ್​​ಸಿ ಪರೀಕ್ಷೆ-2ರ ಫಲಿತಾಂಶ ಫಲಿತಾಂಶ ಬುಧವಾರ ಪ್ರಕಟವಾಗಿದೆ.

ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಈ ವರ್ಷ 2ನೇ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಮತ್ತು karresults.nic.in ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ.

ವಿದ್ಯಾರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ ಮತ್ತು ಫಲಿತಾಂಶದ ಲಿಂಕ್ ಅನ್ನು ತೆರೆದ ನಂತರ, ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ  ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು. ನಂತರ ಫಲಿತಾಂಶ ಲಭ್ಯವಾಗಲಿದೆ.

ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್ 14 ಮತ್ತು ಜೂನ್ 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!