ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸೋ ಚಾನ್ಸೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಉತ್ತರಿಸಿದ್ದಾರೆ.
ಮುಡಾ ಹಗರಣದ ಹೆಸರು ಹೇಳುತ್ತಿದಂತೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ, ಎಷ್ಟು ಸಲ ಇದರ ಬಗ್ಗೆ ಹೇಳುವುದು? ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ ಎಂದಿದ್ದಾರೆ.
ನಮ್ಮ ಜಮೀನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದರು. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ? ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ. ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತಪ್ಪಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾದರೆ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.