ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ಸಲ್ಲಿಸಿದೆ.
ರಾಯಚೂರಿನ ವಿಜಯ್ ಕುಮಾರ್ ಪತ್ರಿಕೆಗೆ ಬರೆದ ಪತ್ರವನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ಪಿಐಎಲ್ ಸಲ್ಲಿಸಿದೆ. ಜುಲೈ 23ರೊಳಗೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಕ್ರಮಗಳ ಬಗ್ಗೆ ತಿಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ತುರ್ತು ಸಂದೇಶ ರವಾನಿಸಲಾಗಿದೆ.
ಸಿಜೆ ಎನ್ವಿ ಅಂಜಾರಿಯಾ ಮತ್ತು ನ್ಯಾ. ಕೆ.ವಿ ಅರವಿಂದ್ ಅವರಿದ್ದ ಪೀಠ ಕಳವಳ ವ್ಯಕ್ತಪಡಿಸಿದರು.
ನಾಗರಿಕರಿಗೆ ಆರೋಗ್ಯ ಮತ್ತು ಚಿಕಿತ್ಸೆಯ ಹಕ್ಕಿದೆ. ಆರೋಗ್ಯಕರ ವಾತಾವರಣದಲ್ಲಿ ಬದುಕುವ ಹಕ್ಕು ನಾಗರಿಕರಿಗೆ ಇದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಆರೋಗ್ಯ ಸೌಲಭ್ಯಗಳ ವಿವರಗಳು, ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸುವ ಕ್ರಮಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕ್ರಮಗಳ ವಿವರಗಳನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.