VIDEO | ಬ್ಯಾಡ್ಮಿಂಟನ್‌ನಲ್ಲಿ ಸೈನಾ ನೆಹ್ವಾಲ್‌ಗೆ ಠಕ್ಕರ್‌ ಕೊಟ್ಟ ರಾಷ್ಟ್ರಪತಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬ್ಯಾಡ್ಮಿಂಟನ್‌ನಲ್ಲಿ ಸೈನಾ ನೆಹ್ವಾಲ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಠಕ್ಕರ್‌ ಕೊಟ್ಟಿರುವ ವಿಡಿಯೋ ವೈರಲ್‌ ಆಗಿದೆ.

ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್​ನಲ್ಲಿ ನಡೆದ ಈ ಪಂದ್ಯವು ರಾಷ್ಟ್ರಪತಿಯ ಕ್ರೀಡಾ ಉತ್ಸಾಹವನ್ನು ಪ್ರದರ್ಶಿಸಿತು. ರಾಷ್ಟ್ರಪತಿ ಮುರ್ಮು ಅವರು ಸೈನಾ ಅವರೊಂದಿಗೆ ಬ್ಯಾಡ್ಮಿಂಟನ್ ಆಡುವಾಗ ಅನುಭವಿ ಆಟಗಾರರಂತೆ ಆಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೈನಾ ನೆಹ್ವಾಲ್ ಅವರೊಂದಿಗೆ ಆಟವನ್ನು ಆನಂದಿಸುತ್ತಿರುವ ದೃಶ್ಯಗಳು ವೈರಲ್ ಆಗಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸೈನಾ ನೆಹ್ವಾಲ್, ಈ ಅನುಭವ ಅವಿಸ್ಮರಣೀಯ ಎಂದು ಬಣ್ಣಿಸಿದ್ದಾರೆ. ಅವರು ತಮ್ಮ ಖುಷಿಯನ್ನು ಹೀಗೆ ಹಂಚಿಕೊಂಡರು. ಇದು ನನ್ನ ಜೀವನದ ಸ್ಮರಣೀಯ ದಿನ. ನನ್ನೊಂದಿಗೆ ಬ್ಯಾಡ್ಮಿಂಟನ್ ಆಡಿದ್ದಕ್ಕಾಗಿ ರಾಷ್ಟ್ರಪತಿ ಮುರ್ಮು ಅವರಿಗೆ ತುಂಬಾ ಧನ್ಯವಾದಗಳು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!