ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಜಿಲ್ಲೆಯ ಗ್ರಾಮೀಣ ಶಾಸಕ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಬೆಂಗಳೂರಿನ ಡಾಲರ್ ಕಾಲೋನಿಯಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಸ್ತುತ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ನಂತರ ಇಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಅವರ ನಿವಾಸಗಳ ಮೇಲೆ ದಿಢೀರ್ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.