ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತದಿಂದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರಂತ ಸಂಭವಿಸಿದೆ.

ರಾಯಚೂರು ಜಿಲ್ಲೆ ಹಟ್ಟಿ ಲಿಂಗಸಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಈ ಘಟನೆ ನಡೆದಿದೆ. ಮೌನೇಶ್ (48) ಮೃತ ಕಾರ್ಮಿಕ.

ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ನೆಲ ಕುಸಿದಿದೆ. ಮೌನೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!