ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನನ್ನು ನೋಡೋಕೆ ಬರೋದಾದ್ರೆ ಆಧಾರ್ ಜತೆಗೆ ತನ್ನಿ ಎಂದು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸದೆಯೂ ಆಗಿರುವ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ಹೆಚ್ಚಿನ ಸಂಖ್ಯೆಯ ಪ್ರವಾಸಿಗರುಹಾಗೂ ಹೊರಗಿನವರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೊಳಿಸುತ್ತಿರುವುದಾಗಿ ಕಂಗನಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಮಂಡಿ ಕ್ಷೇತ್ರದಲ್ಲಿದ್ದರೆ ನಿಯೋಜಿತವಾದ ಸಂವಾದ ಕೇಂದ್ರದಲ್ಲಿ ಸಂದರ್ಶಕರನ್ನ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.
ಮಾಚಲ ಪ್ರದೇಶದ ದೊಡ್ಡ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಹೆಚ್ಚಿನ ಪ್ರವಾಸಿಗರು ಬರುವುದರಿಂದ ಕ್ಷೇತ್ರದ ಜನರಿಗೆ ಅನಾನುಕೂಲ ಆಗಬಹುದು. ಹಾಗಾಗಿ ಕ್ಷೇತ್ರದ ಜನ ಆಧಾರ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.