ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಕುರಿತು ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡರು ತಕ್ಕ ತಿರುಗೇಟು ನೀಡಿದ್ದಾರೆ. “ಸಿದ್ದರಾಮಯ್ಯ ಲೀಸ್ ಬೇಸ್ ಸಿಎಂ ಆಗಿದ್ದರೆ, ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದು ಹೇಗೆ?” ಎಂದು ಅವರು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಅವರು 136 ಸ್ಥಾನಗಳ ಸ್ಪಷ್ಟ ಬಹುಮತದೊಂದಿಗೆ ಸಿಎಂ ಆಗಿದ್ದಾರೆ. ಆದರೆ ಕುಮಾರಸ್ವಾಮಿ ಅವರು ಕೇವಲ 42 ಸ್ಥಾನ ಗೆದ್ದು ‘ಲೀಸ್’ ಆಧಾರದ ಮೇಲೆಯೇ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವರು ಎಂದಿಗೂ 113ರ ಮ್ಯಾಜಿಕ್ ಸಂಖ್ಯೆ ತಲುಪಿಲ್ಲ ಎಂಬುವುದನ್ನು ನೆನಪಿಸಿದರು.
ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ತಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ಧಿಸುವುದಾದರೆ ಸ್ವಾಗತವಿದೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು ಎಂದು ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ತಮಗೆ ಗೊತ್ತಿಲ್ಲ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ವಿಷಯವನ್ನು ಅನಗತ್ಯವಾಗಿ ಚರ್ಚಿಸಬಾರದು ಎಂದು ಅವರು ಮನವಿ ಮಾಡಿದರು.


