ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ: ಶಾಸಕ ದದ್ದಲ್​ಗೆ ಮತ್ತೆ ಎಸ್ಐಟಿ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ ಎಸ್ಐಟಿ ಮತ್ತೆ ನೋಟಿಸ್ ನೀಡಿದೆ.

ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚಿಸಿದೆ.

ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಮೇಲೆ ಎಸ್​ಐಟಿ ಮುಂದೆ ಬಂದಿದ್ದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದರು. ಸುಮಾರು ನಾಲ್ಕು ಗಂಟೆಗೂ ಹೆಚ್ಚು ವಿಚಾರಣೆ ಮಾಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ಮಾಡಿದ್ದಾರೆ.

ಬೆಂಗಳೂರಿನ ಎಸ್​​ಐಟಿ ಕಚೇರಿ ಬಳಿ ಶಾಸಕ ದದ್ದಲ್​ ಪ್ರತಿಕ್ರಿಯಿಸಿದ್ದು, ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ಕೆಲ ದಾಖಲೆ ಪರಿಶೀಲಿಸಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಕೂಡ ಕೇಳಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ. ಎಸ್​​​ಐಟಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!