ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಂದಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ.
ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆಗೆ ರೈತರು ಮತ್ತು ಆಮ್ಲಜನಕ ದುರಂತದ ಸಂತ್ರಸ್ತರು ಈಗಾಗಲೇ ಮನವಿ ಸಲ್ಲಿಸಿದ್ದರು. ವಿವಿಧ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದು, ಕಸದ ರಾಶಿಯಲ್ಲಿಯೇ ಅರ್ಜಿಗಳು ಕಂಡು ಬಂದವು. ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅರ್ಜಿ ಪತ್ರಗಳು ಬಿದ್ದಿವೆ. ಸಾರ್ವಜನಿಕರು, ರೈತರು ಗಂಟೆಗಟ್ಟಲೆ ಕಾದು ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರೂ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ.
ಇದು ದುರಂಹಕಾರದ ಪರಮಾವಧಿ ಎಂದು ರೈತ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ. ಸಿದ್ದರಾಮಯ್ಯ ಕೂಡಲೇ ಜನರ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದಾಗ ಕಪ್ಪು ಬಾವುಟ ಹಾರಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.