ಹೊಸದಿಗಂತ ಡಿಜಿಟಲ್ ಡೆಸ್ಕ್:
ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿದುರ್ಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ದಂಪತಿ ದಾರುಣವಾಗಿ ಮೃತಪಟ್ಟಿದ್ದಾರೆ.
ಜಮೀನಿಗೆ ತೆರಳಲು ರೈಲ್ವೆ ಹಳಿ ದಾಟುವ ವೇಳೆ ರೈಲು ಬಂದು ಡಿಕ್ಕಿಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನ ನಾಯಕರಂಡಹಳ್ಳಿ ಗ್ರಾಮದ ಚಂದ್ರ ನಾಯ್ಕ (47) ಹಾಗೂ ಜಯಾಭಾಯಿ (43) ಎಂದು ತಿಳಿದು ಬಂದಿದೆ.
ಮೃತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಯಕರಂಡಹಳ್ಳಿ ಗ್ರಾಮದವರಾಗಿದ್ದಾರೆ. ದುರ್ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.