January14, 2026
Wednesday, January 14, 2026
spot_img

ಮಾರ್ಚ್ ಮೊದಲು, ಎರಡನೇ ವಾರದಲ್ಲಿ ರಾಜ್ಯ ಬಜೆಟ್: ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಅನ್ನು ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಮೈಸೂರಿನ ಏರ್ ಪೋರ್ಟ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ. ಈ ಬಗ್ಗೆ ಚರ್ಚಿಸಿ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದರು.

ರಾಜ್ಯ ಬಜೆಟ್ ಗೆ ಮುನ್ನವೇ ಸರ್ಕಾರದ ಸಾಧನಾ ಸಮಾವೇಶ ಮಾಡಲಾಗುತ್ತದೆ. ಫೆ.13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

Most Read

error: Content is protected !!