ಹೊಸ ದಿಗಂತ ವರದಿ, ಬಳ್ಳಾರಿ:
ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ಇಡಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು, ಮಂಗಳವಾರ ನಗರಕ್ಕೆ ಆಗಮಿಸಿದ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ಅವರ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಎರಡು ಮಾನನಷ್ಟ ಮೊಕದ್ದಮೆ ಪ್ರಕರಣ ಬಿಟ್ಟು ಉಳಿದ 4 ಪ್ರಕರಣಗಳನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಬೀಡು ಬಿಟ್ಟು, ಘಟನಾ ಸ್ಥಳ, ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಮಾಹಿತಿಯನ್ನು ಕಲೆ ಹಾಕಿ ಎಲ್ಲ ಆಯಾಮಗಳಿಂದ ತನಿಖೆ ನಡೆಸಲು ಮುಂದಾಗಿದ್ದಾರೆ. ಇದರ ಮಧ್ಯೆ ಘಟನೆಯಲ್ಲಿ ಗುಂಡಿನ ದಾಳಿಯಲ್ಲಿ ಮೃತಪಟ್ಟ ರಾಜಶೇಖರ ರೆಡ್ಡಿ ಪ್ರಕರಣ ಸೇರಿ ಘಟನೆಯ ಸಂಪೂರ್ಣ ತನಿಖೆ ನಡೆಸಲು ಸಿಐಡಿಯ ಸಹಾಯಕ ಪ್ರಧಾನ ನಿರ್ದೇಶಕ ಬಿ.ಕೆ.ಸಿಂಗ್ ಅವರ ನೇತೃತ್ವದ ತಂಡ ನಗರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಸಿಂಗ್ ಅವರ ಜೊತೆ ಸಿಐಡಿ ಎಸ್ಪಿ ಹರ್ಷ ಪ್ರಿಯ ಸೇರಿದಂತೆ ಪೋಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.


