ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಬಿ.ನಾಗೇಂದ್ರ ಗಂಭೀರ ಆರೋಪ ಎದುರಿಸುತ್ತಿದ್ದರೂ ಅವರನ್ನು ಬಂಧಿಸಲು ಈಡಿ ಬರಬೇಕಾಯಿತು ಎಂದು ಕುಮಾರಸ್ವಾಮಿ ಹೇಳಿದರು. ಇದು ಸಿದ್ದರಾಮಯ್ಯ ಸರಕಾರದಲ್ಲಿ ಕಾಣುತ್ತಿರುವ ಪಾರದರ್ಶಕತೆಯಾಗಿದ್ದು, ಹಿಂದುಳಿದ ವರ್ಗಗಳ ಉದ್ಧಾರಕ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದು, ಹಿಂದುಳಿದವರ ಹೆಸರಲ್ಲಿ ಲೂಟಿ ಮಾಡಿ ಈ ವರ್ಗದ ಜನರಿಗಾಗಿ ಮೀಸಲಿಟ್ಟ ಹಣವನ್ನು ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿರುವ ಸಿದ್ದರಾಮಯ್ಯ ಅವರು ಜನರಿಂದ ಛೀ ಥೂ ಅನಿಸಿಕೊಳ್ಳುವುದು ಬೇಡ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.