ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಬೆನ್ನು ನೋವಿನ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಂದು ಮಧ್ಯಾಹ್ನ ಡಿಸ್‌ಚಾರ್ಜ್ ಮಾಡಲಾಗಿದೆ
ಬೆನ್ನು ನೋವಿನಿಂದ ಬಳಲುತ್ತಿದ್ದ ರಾಜನಾಥ ಸಿಂಗ್ ಅವರು ಗುರುವಾರ ಬೆಳಿಗ್ಗೆ ಏಮ್ಸ್‌ನ ನ್ಯೂರೋ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ದಾಖಲಾಗಿದ್ದರು.ಇದೀಗ ಆರೋಗ್ಯವಾಗಿ ಇದ್ದಾರೆ. ಎರಡು ದಿನಗಳ ಚಿಕಿತ್ಸೆಯ ಬಳಿಕ ಅವರನ್ನು ಇಂದು ಮಧ್ಯಾಹ್ನ ಡಿಸ್‌ಚಾರ್ಜ್ ಮಾಡಲಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವೈದ್ಯೆ ರಿಮಾ ದಾದಾ ತಿಳಿಸಿದ್ದಾರೆ.