ಹೊಸದಿಗಂತ ವರದಿ,ಶಿವಮೊಗ್ಗ:
ಶಿರಾಳಕೊಪ್ಪ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಮೇಶ್ ಅವರನ್ನು ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಭ್ರಷ್ಟಾಚಾರ ವಿಷಯಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಗೋ ಹತ್ಯೆ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿಕಳೆದ ಒಂದು ತಿಂಗಳಿನಿಂದ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ವಿವಿಧ ಆರೋಪ ಮಾಡಿ ಪ್ರತಿಭಟನೆ ಸಹ ನಡೆಸಿತ್ತು.