ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನಿ ವ್ಯಕ್ತಿಯೊಬ್ಬರು ಮೆದುಳು ತಿನ್ನುವ ಅಮೀಬಿಕ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ, ಪಾಕಿಸ್ತಾನದಲ್ಲಿ ಈ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿದೆ.
ಮೃತರನ್ನು ಔರಂಗಜೇಬ್ ಎಂದು ಗುರುತಿಸಲಾಗಿದೆ. ಜೂನ್ 7 ರಂದು ಅವರು ತಮ್ಮ ಸ್ನೇಹಿತರೊಂದಿಗೆ ಕ್ವೈದಾಬಾದ್‌ನ ಫಾರ್ಮ್‌ಹೌಸ್‌ಗೆ ಹೋಗಿದ್ದರು. ಬಳಿಕ ಸೋಂಕಿಗೆ ತುತ್ತಾಗಿದ್ದಾರೆ. ಔರಂಗಜೇಬ್‌ಗೆ ಆರಂಭದಲ್ಲಿ ವಾಕರಿಕೆ ಮತ್ತು ಜ್ವರವನ್ನು ಅನುಭವಿಸಿದರು.
ಅವರನ್ನು ಜೂನ್ 10 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಜುಲೈ 11 ರಂದು ವೈರಸ್ ದೃಢಪಟ್ಟಿತು. ಚಿಕಿತ್ಸೆ ಫಲಕಾರಿಯಾಗದೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಹಿಂದೆ ಕೋರಂಗಿ ಮತ್ತು ಮಲಿರ್‌ನಲ್ಲಿ ಇನ್ನೂ ಎರಡು ಸಾವುಗಳು ವರದಿಯಾಗಿದ್ದವು.