ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವಿಚಕ್ರವಾಹನದಲ್ಲಿದ್ದ ಇಬ್ಬರು ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಕಡಿವಾಣ ಕಟ್ಟೆಯ ಯೋಗೇಶ್ (27) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಿದ್ದಾಪುರ ಗ್ರಾಮದ ಪ್ರವೀಣ್ (26) ಮೃತಪಟ್ಟಿದ್ದಾರೆ.
ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.