ರಾಜ್ಯದಲ್ಲಿ 24 ಗಂಟೆಯಲ್ಲಿ 445 ಜನರಿಗೆ ಡೆಂಗ್ಯೂ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 445 ಜನರಿಗೆ ಡೆಂಗ್ಯೂ ಪಾಸಿಟಿವ್ ದೃಢಪಟ್ಟಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.

ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಿಂದ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!