Tuesday, January 13, 2026
Tuesday, January 13, 2026
spot_img

ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಬಿಲ್ಲಾವರ್ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಯ ತಂಡದ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಗುಂಡಿನ ಚಕಮಕಿ ನಡೆದಿದೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ ನಂತರ ಕಾರ್ಯಾಚರಣೆ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಹೋಗ್ ಅರಣ್ಯ ಪ್ರದೇಶದ ಕಾಮದ್ ನಲ್ಲಾದಿಂದ ಸುಮಾರು 10 ಕಿ.ಮೀ. ದೂರದಲ್ಲಿರುವ ಬಿಲ್ಲಾವರ್‌ನ ನಜೋಟೆ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ.

ಭದ್ರತಾ ಪಡೆಗಳ ಚಲನವಲನವನ್ನು ಗಮನಿಸಿದ ಶಂಕಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ವೇಳೆ ಭದ್ರತಾ ಪಡೆ ಸಹ ಪ್ರತಿದಾಳಿ ನಡೆಸಿತು. ಇದಾದ ಬಳಿಕ ಕಾರ್ಡನ್-ಆ್ಯಂಡ್-ಸರ್ಚ್ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಉಗ್ರರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರಿದಿವೆ.

ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ. ಈ ಪ್ರದೇಶದಲ್ಲಿ ಇಬ್ಬರು ಅಥವಾ ಮೂವರು ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Most Read

error: Content is protected !!