WEATHER | ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ರೆಡ್​ ಅಲರ್ಟ್, ಎಲ್ಲಿಯವರೆಗೂ ಈ ಮಳೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಮುಂದುವರಿಯುವ ಸಾಧ್ಯತೆ ಇದೆ. ಜು.19ರವರೆಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!