ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ 18 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ಹೆಚ್ಚು ಮಳೆಯಾಗಲಿರುವ ನಿರೀಕ್ಷೆಯಿಂದ ದಕ್ಷಿಣ ಕನ್ನಡದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.